ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಸಂಬಂಧಿಸಿದಂತೆ ಕಾರವಾರ ಅಂಚೆ ವಿಭಾಗದಲ್ಲಿ ಒಟ್ಟು 43 ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 40 ವರ್ಷದೊಳಗಿರಬೇಕು ಹಾಗೂ 10ನೇ ತರಗತಿ ತೇರ್ಗಡೆ ಕಡ್ಡಾಯ. ಕನ್ನಡವನ್ನು 10 ನೇ ತರಗತಿಯಲ್ಲಿ ಒಂದು ಭಾಷೆಯನ್ನಾಗಿ ಅಧ್ಯಯನ ಮಾಡಿರಬೇಕು, ಬೇರೆ ಯಾವುದೇ ವಿಧಾನದ ಮೂಲಕ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಮಧ್ಯವರ್ತಿಗಳ ಮೂಲಕ ಪರೀಕ್ಷೆ ಸಂದರ್ಶನ ಇರುವುದಿಲ್ಲ.

ಕೇವಲ ಎಸ್‍ಎಸ್‍ಎಲ್‍ಸಿ ಗರಿಷ್ಠ ಅಂಕ ಮಾನದಂಡದಲ್ಲಿ ನೇಮಕಾತಿ ನಡೆಯಲ್ಲಿದ್ದು, ಅರ್ಜಿ ಸಲ್ಲಿಸುವ ಮೊದಲು ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಭಾವಚಿತ್ರ. ಸಹಿ ಇವುಗಳನ್ನು ಸ್ಕ್ಯಾನಿಂಗ್ ಮಾಡಿ ಅದನ್ನು ನಿಗದಿತ ನಮೂನೆಯಲ್ಲಿ ವೆಬ್‍ಸೈಟ್ ಗೆ ಅಪ್‍ಲೋಡ್ ಮಾಡಬೇಕು.

ನೇಮಕಾತಿಯ ಹುದ್ದೆಯ ಬಗ್ಗೆ ಹೆಚ್ಚಿನ ವಿವರಗಳು ವೆಬ್‍ಸೈಟ್ ನಲ್ಲಿ ಲಭ್ಯವಿದೆ. ಆನ್ ಲೈನ್ ಮೂಲಕ ರಿಜಿಸ್ಟರ್ ಆಗಲು ಆಗಸ್ಟ್ 31 ರಿಂದ ಸೆಪ್ಟೆಂಬರ್ 19 ಕೊನೆಯ ದಿನ ಹಾಗೂ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 21 ಕೊನೆಯ ದಿನವಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ದೇಶದಾದ್ಯಂತ ಖಾಲಿ ಇರುವ ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಏಕಕಾಲಕ್ಕೆ, ನಡೆಯುತ್ತಿದ್ದು, ಅರ್ಹ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಾರವಾರ ವಿಭಾಗ ಅಂಚೆ ಅಧೀಕ್ಷಕ ಹೂವಪ್ಪ ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

=================

Leave a Reply

You cannot copy content of this page