ಕಾರವಾರ: ಸೆಪ್ಟಂಬರ್ 19 ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ 7000 ಪ್ರಕರಣಗಳನ್ನು ರಾಜೀ ಸಂಧಾನ ಮೂಲಕ ಇತ್ಯರ್ಥ ಪಡಿಸುವ ಗುರಿ ಹೊಂದಲಾಗಿದ್ದು, ಸಾರ್ವಜನಿಕರು ಲೋಕ ಅದಾಲತ್ ನ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ. ಹೇಳಿದರು.

ನ್ಯಾ. ದಿವ್ಯಶ್ರೀ ಸಿ.ಎಂ.

ಅವರು ಶುಕ್ರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಲೋಕ ಅದಾಲತ್‍ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಚಿಸಿದ್ದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು .

ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿಯಾಗಬಲ್ಲ ಸಿವಿಲ್, ಕ್ರಿಮಿನಲ್, ಸಾಲ ವಸೂಲಾತಿ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಕೌಟುಂಬಿಕ ವಿವಾದಗಳು, ಅಪಘಾತ ಪರಿಹಾರ, ಭೂ ಸ್ವಾಧೀನ ಪರಿಹಾರ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಲ್ಲ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜಿ ಮಾಡಿಕೊಳ್ಳುವ ಕುರಿತು ತಿಳಿಸುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದರು.

ಜಿಲ್ಲೆಯಲ್ಲಿ ಜುಲೈ ಮಾಹೆಯಲ್ಲಿ ನಡೆದ ಲೋಕ ಅದಾಲತ್‍ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಸುಮಾರು 6731 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿತ್ತು. ಪ್ರಸ್ತುತ ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಒಟ್ಟು 43,113 ಪ್ರಕರಣಗಳು ಬಾಕಿ ಇದ್ದು, ಇವುಗಳಲ್ಲಿ 7000 ಕ್ಕೂ ಹೆಚ್ಚು ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥಗೊಳಿಸುವ ಗುರಿ ಹೊಂದಲಾಗಿದೆ ಎಂದರು.
ಲೋಕ ಅದಾಲತ್ ನಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ಇತ್ಯರ್ಥಪಡಿಸುವ ಉದ್ದೇಶದಿಂದ ಈಗಾಗಲೇ ಪ್ರಕರಣಗಳು ಬಾಕಿ ಇರುವ ಸಂಬಂಧÀಪಟ್ಟ ಇಲಾಖೆಗಳ ಅಧಿಕಾರಿಗಳು, ಬ್ಯಾಂಕ್ ಮತ್ತು ವಿಮೆ ಕಂಪೆನಿಗಳ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಲಾಗಿದ್ದು, ಪ್ರಕರಣಗಳ ಇತ್ಯರ್ಥಕ್ಕೆ ಅಗತ್ಯ ಸಹಕಾರ ನೀಡುವಂತೆ ತಿಳಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಮಧ್ಯಸ್ಥಿಕೆ ಸಂಧಾನ 1 ಮತ್ತು 2 ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಇವುಗಳಲ್ಲಿ ಒಟ್ಟು 258 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಪ್ರಸ್ತುತ ನಡೆಯುವ ಮೀಡಿಯೇಷನ್ 3 ರ ಮೂಲಕ ಕಡಿಮೆ ವೆಚ್ಚದಲ್ಲಿ ಮತ್ತು ಶೀಘ್ರದಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದ್ದು, ಜಿಲ್ಲೆಯ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

===================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading