ಕಾರವಾರ ಯೋಜನಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಪದವಿ ಹೊಂದಿದ ಅಭ್ಯರ್ಥಿಗಳಿಗೆ ಖಾಸಗಿ ಕಂಪನಿಯಾದ ಐ.ಸಿ.ಐ.ಸಿ.ಐ ಬ್ಯಾಂಕ್ ನಲ್ಲಿ ಖಾಲಿ ಇರುವ ಸೇಲ್ಸ್ ಮತ್ತು ರಿಲೇಶನ್ ಶಿಪ್ ಮ್ಯಾನೇಜರ್ ಹುದ್ದೆಗೆ ಸೆ.5 ರಂದು ನೇರ ಸಂದರ್ಶನವನ್ನು ಯೋಜನಾ ವಿನಿಮಯ ಕಚೇರಿ, ಶ್ರೀಮತಿ ಪ್ರೇಮಾಬಾಯಿ ರಾಯ್ಕರ ಬಿಲ್ಡಿಂಗ್, ಪಂಚಾಬ್ ನ್ಯಾಶನಲ್ ಬ್ಯಾಂಕ್ ಹತ್ತಿರ, ಸಿವಿಲ್ ಕೋರ್ಟ್ ರಸ್ತೆ, ಕಾರವಾರದಲ್ಲಿ ಆಯೋಜಿಲಾಗಿದೆ.

ಈ ಸಂದರ್ಶನದಲ್ಲಿ 18 ರಿಂದ 25 ವರ್ಷದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಉದ್ಯೋಗದ ಸ್ಥಳ ಉತ್ತರ ಕನ್ನಡ ಜಿಲ್ಲೆ, ಹುಬ್ಬಳ್ಳಿ, ಬೆಳಗಾವಿ. ಆಸಕ್ತ ಅಭ್ಯರ್ಥಿಗಳು ರೆಸ್ಯೂಮ್ ಪ್ರತಿಯೊಂದಿಗೆ, ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಯೋಜನಾ ವಿನಿಮಯ ಕಚೇರಿಗೆ ಸಂಪರ್ಕಿಸುವಂತೆ ಕಾರವಾರ ಯೋಜನಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರವಾರ, ಸೆ.02(ಕರ್ನಾಟಕ ವಾರ್ತೆ):- ಅಂಕೋಲಾ ತಾಲೂಕಿನ ಬೆಳಸೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿ ಇರುವ ಭೌತಶಾಸ್ತ್ರ ಹಾಗೂ ರಾಸಾಯನಶಾಸ್ತ್ರ ತಲಾ 1 ಹುದ್ದೆಗೆ ಎಂ.ಎಸ್.ಸಿ, ಬಿ.ಎಡ್ ವಿದ್ಯಾರ್ಹತೆ ಹೊಂದಿದ ಅರ್ಹ ಅಭ್ಯರ್ಥಿಗಳಿಂದ ಗೌರವ ಧನ ರೂ.18,150 ಆಧಾರದ ಮೇಲೆ ಅತಿಥಿ ಉಪನ್ಯಾಸಕರ ಹುದ್ದೆಗೆ ನೇಮಿಸಿಕೊಳ್ಳಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ಪರಿಚಯ ಮತ್ತು ದಾಖಲಾತಿಗಳೊಂದಿಗೆ ಅಂಕೋಲಾ ತಾಲೂಕಿನ ಬೆಳಸೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜನ್ನು ಸಂಪರ್ಕಿಸಲು ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜು, ಬೆಳಸೆ ಯನ್ನು ಸಂಪರ್ಕಿಸುವಂತೆ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜವಾಹರ ನವೋದಯ ವಿದ್ಯಾಲಯದಲ್ಲಿ 2027-28ನೇ ಸಾಲಿಗೆ ಖಾಲಿ ಇರುವ ಸ್ಥಾನಗಳಿಗೆ 9 ಹಾಗೂ 11 ನೇ ತರಗತಿ (ವಿಜ್ಞಾನ ಮತ್ತು ವಾಣಿಜ್ಯ) ಪ್ರವೇಶ ಪಡೆಯಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
9ನೇ ತರಗತಿ ಪ್ರವೇಶ ಬಯಸುವ ಅಭ್ಯರ್ಥಿಗಳು ವೆಬ್ ಸೈಟ್ ನಲ್ಲಿ ಹಾಗೂ 11 ನೇ ತರಗತಿ ಪ್ರವೇಶ ಬಯಸುವ ಅಭ್ಯರ್ಥಿಗಳು ವೆಬ್‍ಸೈಟ್ ಮೂಲಕ ಸೆ.30 ಅರ್ಜಿ ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸುವಂತೆ ಮಳಗಿ, ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

=========================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading