ಶ್ರೀಕೃಷ್ಣ ಜನ್ಮಾಷ್ಟಮಿಯ ನಿಮಿತ್ತ ಯಲ್ಲಾಪುರ ಟೌನ್ ಲಯನ್ಸ್ ಕ್ಲಬ್ ವತಿಯಿಂದ ನಂದಗೋಕುಲ-2026 ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಈ ಸ್ಪರ್ಧೆಯು ಸೆ.6 ರವಿವಾರ ಮಧ್ಯಾಹ್ನ 4.30 ಗಂಟೆಯಿಂದ ಯಲ್ಲಾಪುರ ಪಟ್ಟಣದ ವೆಂಕಟರಮಣ ಮಠದ ವೇದವ್ಯಾಸ ಸಭಾಭವನದಲ್ಲಿ ನಡೆಯಲಿದೆ ಎಂದು ಯಲ್ಲಾಪುರ ಲಯನ್ಸ್ ಕ್ಲಬ್ ಅಧ್ಯಕ್ಷ ಶೇಷಗಿರಿ ಪ್ರಭು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿದ ಅವರು, ಎಲ್.ಕೆ.ಜಿ. ಯುಕೆಜಿ, ಅಂಗನವಾಡಿ ಆರು ವರ್ಷದವರೆಗಿನ ಮಕ್ಕಳಿಗಾಗಿ ಬಾಲಗೋಪಾಲ ಸ್ಪರ್ಧೆ ಮತ್ತು 6 ರಿಂದ 8 ವರ್ಷದ ವರೆಗಿನ ಮಕ್ಕಳಿಗಾಗಿ ರಾಧಾ-ಕೃಷ್ಣ ಜೋಡಿ ವೇಷ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಎರಡೂ ಸ್ಪರ್ಧೆಗಳು ಪ್ರತ್ಯೇಕವಾಗಿ ಇರುತ್ತಿದ್ದು, ಪ್ರತ್ಯೇಕ ಬಹುಮಾನ ಮತ್ತು ಪ್ರಮಾಣಪತ್ರ ನೀಡಲಾಗುವುದು ಎಂದು ತಿಳಿಸಿದ್ದಾರೆ.

==================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading