ಯೋಜನಾ ಉದ್ಯೋಗ ವಿನಿಮಯ ಕಚೇರಿ, ಕಾರವಾರ ವತಿಯಿಂದ ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೋಮ ಹಾಗೂ ಪದವಿ ಹೊಂದಿದ ಅಭ್ಯರ್ಥಿಗಳಿಗೆ ಖಾಸಗಿ ಕಂಪನಿಯಾದ ಮೈಟೈಲ್ಸ್ ಪ್ರೈ.ಲಿ. ಇವರಲ್ಲಿ ಖಾಲಿ ಇರುವ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಸೆ.9 ರಂದು ನೇರ ಸಂದರ್ಶನವನ್ನು ಕಾರವಾರದ ಯೋಜನಾ ಉದ್ಯೋಗ ವಿನಿಮಯ ಕಛೇರಿ, ಶ್ರೀಮತಿ ಪ್ರೇಮಾಬಾಯಿ ರಾಯ್ಕರ ಬಿಲ್ಡಿಂಗ್, ಪಂಜಾಬ್ ನ್ಯಾಶನಲ್ ಬ್ಯಾಂಕ್ ಹತ್ತಿರ, ಸಿವಿಲ್ ಕೋರ್ಟ್ ರಸ್ತೆ ಇಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಶನದಲ್ಲಿ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದು, ಉದ್ಯೋಗದ ಸ್ಥಳ ಬೆಂಗಳೂರು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ರೆಸ್ಯೂಮ್ ಪ್ರತಿಯೊಂದಿಗೆ, ನೇರ ಸಂದರ್ಶನದಲ್ಲಿ ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗಳಿಗಾಗಿ ಕಚೇರಿಯನ್ನು ಸಂಪರ್ಕಿಸುವಂತೆ ಯೋಜನಾ ಉದ್ಯೋಗ ವಿನಿಮಯ ಕಚೇರಿ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.