ಜಿಲ್ಲಾ ಪಂಚಾಯತಿ ಉತ್ತರಕನ್ನಡ, ತೋಟಗಾರಿಕಾ ಇಲಾಖೆ ಯಲ್ಲಾಪುರ, ಕೃಷಿ ಇಲಾಖೆ ಯಲ್ಲಾಪುರ ಹಾಗೂ ಹಾಸಣಗಿ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ಅ.8 ಗುರುವಾರ ಬೆಳಿಗ್ಗೆ 10.30 ಗಂಟೆಗೆ ಹಾಸಣಗಿ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಕಿಸಾನ ಗೋಷ್ಠಿ ಕಾರ್ಯಕ್ರಮ ನಡೆಯಲಿದೆ.

ಹಾಸಣಗಿ ಸೊಸೈಟಿ ಅಧ್ಯಕ್ಷ ಆರ್.ಎನ್.ಹೆಗಡೆ ಗೋರ್ಸಗದ್ದೆ ಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾಲೂಕಾ ಕೃಷಿ ಸಮಾಜದ ಅಧ್ಯಕ್ಷ ವೆಂಕಟ್ರಮಣ ಭಟ್ಟ ಕಾರೇಮನೆ, ಆತ್ಮಾ ರೈತ ಸಲಹಾ ಸಮೀತಿಯ ತಾಲೂಕಾ ಅಧ್ಯಕ್ಷ ಗಣೇಶ ಹೆಗಡೆ ಸವಣಗೇರಿ, ಹಾಸಣಗಿ ಸೊಸೈಟಿಯ ಉಪಾಧ್ಯಕ್ಷ ಟಿ.ವಿ.ಹೆಗಡೆ ಬೆದೆಹಕ್ಲು, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸತೀಶ ಹೆಗಡೆ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ನಾಯ್ಕ ಭಾಗವಹಿಸಲಿದ್ದಾರೆ.

ಸಂಪನ್ಮೂಲ ವ್ಯಕ್ತಿಗಳಾಗಿ ನಿವೃತ್ತ ವಿಜ್ಞಾನಿ ಡಾ.ವಿನಾಯಕ ಹೆಗಡೆ, ಶಿರಸಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಗಣೇಶ ಹೆಗಡೆ, ನಿವೃತ್ತ ಸಹಾಯಕ ಕೃಷಿ ನಿರ್ದೇಶಕ ಶಂಕರ ಹೆಗಡೆ ಕುಮಟಾ ಪಾಲ್ಗೊಳ್ಳಲಿದ್ದಾರೆ.

ಮಣ್ಣಿನ ಆರೋಗ್ಯ, ಅಡಿಕೆಯಲ್ಲಿ ಎಲೆಚುಕ್ಕಿ ರೋಗದ ಸಮಗ್ರ ನಿರ್ವಹಣೆ, ಅಡಿಕೆಯಲ್ಲಿ ಸಮಗ್ರ ಪೋಷಕಾಂಶ ನಿರ್ವಹಣೆ, ಅಡಿಕೆ ತೋಟದಲ್ಲಿ ಪರ್ಯಾಯ ಬೆಳೆ ಸಾಧ್ಯತೆ, ಅಡಿಕೆ ತೋಟದಲ್ಲಿ ಅಂತರ್ ಬೆಳೆಯಾಗಿ ಕಾಫಿ ಮುಂತಾದ ವಿಷಯಗಳ ಕುರಿತು ಮಾಹಿತಿ ವಿನಿಮಯ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸಿ ಪ್ರಯೋಜನ ಪಡೆಯಬೇಕು ಎಂದು ಹಾಸಣಗಿ ಸೊಸೈಟಿ ಮುಖ್ಯ ಕಾರ್ಯನಿರ್ವಾಹಕ ಜಿ.ಎನ್.ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

==================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading