ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶಾಖಾ ಮಠವಾದ ಯಲ್ಲಾಪುರ ಪಟ್ಟಣದ ನಾಯಕನಕೆರೆಯ ಶಾರದಾಂಬಾ ದೇವಾಲಯದಲ್ಲಿ ಶರನ್ನವರಾತ್ರಿ ಉತ್ಸವವು ಅತ್ಯಂತ ವಿಜೃಂಭಣೆಯಿಂದ ನಡೆಯುತ್ತಿದೆ.

ಈ ನಿಮಿತ್ತ ದೇವಾಲಯದಲ್ಲಿ ಪ್ರತಿ ನಿತ್ಯ ನಾನಾ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ದೇವಾಲಯದ ಪ್ರಧಾನ ಅರ್ಚಕ ವಿ.ಗೋಪಾಲಕೃಷ್ಣ ಭಟ್ಟ ಕುಂಕಿಪಾಲ ನೇತ್ರತ್ವದಲ್ಲಿ ಪೂಜೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಅಪಾರ ಸಂಖ್ಯೆಯಲ್ಲಿ ದೇವಾಲಯಕ್ಕೆ ಆಗಮಿಸುತ್ತಿರುವ ಭಕ್ತರು ಶಾರದಾಂಬಾ ದೇವರ ಸನ್ನಿಧಿಯಲ್ಲಿ ಸಪ್ತಶತಿ ಪಾರಾಯಣ, ಕುಂಕುಮಾರ್ಚನೆ, ಉಡಿ ಸೇವೆ, ಹಣ್ಣು ಕಾಯಿ ಸೇವೆ ಮುಂತಾದ ಸೇವೆಗಳನ್ನು ಸಲ್ಲಿಸುತ್ತಿದ್ದಾರೆ.

ದೇವಾಲಯದಲ್ಲಿ ಪ್ರತಿನಿತ್ಯ ಭಜನೆ, ಶಾಂಕರ ಸ್ತ್ರೋತ್ರ ಪಠಣ, ಭಗವದ್ಗೀತಾ ಪಠಣ ನಡೆಯುತ್ತಿದೆ. ಶ್ರೀದೇವರಿಗೆ ವಿಶೇಷ ಅಲಂಕಾರ ಮಾಡುತ್ತಿರುವುದು ಭಕ್ತರ ಕಣ್ಮನ ತಣಿಸುತ್ತಿದೆ.

ಬೆಳಿಗ್ಗೆಯಿಂದ ರಾತ್ರಿಯವರೆಗೂ ದೇವರ ದರ್ಶನಕ್ಕೆ ಭಕ್ತರು ಆಗಮಿಸುತ್ತಿದ್ದಾರೆ. ರಾತ್ರಿ 8 ಗಂಟೆಗೆ ಮಹಾಪೂಜೆ, ಮಹಾಮಂಗಳಾರತಿಯನ್ನು ಭಕ್ತರು ಶ್ರದ್ಧಾ ಭಕ್ತಿಯಿಂದ ಕಣ್ತುಂಬಿಸಿಕೊಳ್ಳುತ್ತಿದ್ದಾರೆ.

ಪ್ರತಿ ದಿನ ರಾತ್ರಿ ಮಹಾಪೂಜೆಯ ನಂತರ ಸಾರ್ವಜನಿಕ ಭೋಜನ ವ್ಯವಸ್ಥೆ ಕಲ್ಪಿಸಲಾಗಿದ್ದು, ನೂರಾರು ಭಕ್ತರು ಅನ್ನ ಪ್ರಸಾದ ಭೋಜನವನ್ನು ಸ್ವೀಕರಿಸುತ್ತಿದ್ದಾರೆ. ಅ.15 ಗುರುವಾರ ದೇವಾಲಯದಲ್ಲಿ ಚಂಡಿಕಾ ಯಾಗ ನಡೆಯಲಿದೆ. ಅ.20 ರಂದು ಬೆಳಿಗ್ಗೆ 10 ಗಂಟೆಗೆ ಬಾಲ ಮಕ್ಕಳ ಅಕ್ಷರಾರಂಭ ಕಾರ್ಯಕ್ರಮ ನಡೆಯಲಿದೆ.

===============

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading