ಯೋಜನಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳಿಗೆ ಖಾಸಗಿ ಕಂಪನಿಯಾದ ಭಾರತ್ ಆಟೋ ಕಾರ್ಸ್ ಪ್ರೈವೆಟ್ ಲಿಮಿಟೆಡ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗೆ ಅ.17 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನೇರ ಸಂದರ್ಶನವನ್ನು ಮಾರುತಿ ಸುಜುಕಿ ಅರೆನಾ, ಸದಾಶಿವಗಡ, ಕಾರವಾರದಲ್ಲಿ ಏರ್ಪಡಿಸಲಾಗಿದೆ.
ಈ ಸಂದರ್ಶನದಲ್ಲಿ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ, ಉದ್ಯೋಗದ ಸ್ಥಳ ಕಾರವಾರ, ಭಟ್ಕಳ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ರೆಸ್ಯೂಮ್ ಪ್ರತಿಯೊಂದಿಗೆ, ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಳಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ: 9620902330, 8277005959 ಅಥವಾ ಕಚೇರಿ ದೂರವಾಣಿ ಸಂಖ್ಯೆ: 08382-226386 ನ್ನು ಸಂಪರ್ಕಿಸುವಂತೆ ಯೋಜನಾ ಉದ್ಯೋಗ ವಿನಿಮಯ ಕಚೇರಿ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.