ಅತೀ ವೇಗ ಹಾಗೂ ನಿಷ್ಕಾಳಜಿಯಿಂದ ಚಲಾಯಿಸಿಕಿಂಡುಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿಯಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಗಾಯವಾದ ಘಟನೆ ನಡೆದಿದೆ.
ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಧಾರವಾಡದ ಮರೆವಾಡ ಗ್ರಾಮದ ಸುನಿಲ್ ನಿಂಗಪ್ಪ ಬೆಟೆಗೆರೆ ದೂರು ದಾಖಲಿಸಿದ್ದಾರೆ.
ಆರೋಪಿ ಕಾರು ಚಾಲಕ ಕಲಘಟಗಿ ತಾಲೂಕಿನ ರಾಮನಾಳದ ಕಲ್ಲಪ್ಪ ಬಸಪ್ಪ ತಿಮ್ಮಾಪುರ ತನ್ನ ಕಾರನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಹುಬ್ಬಳ್ಳಿ ಕಡೆಯಿಂದ ಯಲ್ಲಾಪುರ ಕಡೆಗೆ ಅತೀ ವೇಗ ಹಾಗೂ ನಿಷ್ಕಾಳಜಿಯಿಂದ ಚಲಾಯಿಸಿಕೊಂಡುಬಂದು, ಮುಂದಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಹಿಂಬದಿಯಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ಮಹಾಂತೇಶ ಬಸಪ್ಪ ಅಮರಗೋಳ ಎಂಬಾತನಿಗೆ ಗಾಯವಾಗಿದೆ. ಅಪಘಾತದಲ್ಲಿ ಬೈಕ್ ಹಾಗೂ ಕಾರು ಜಕಂಗೊಂಡಿವೆ. ಅ.20 ರಂದು ಮಧ್ಯಾಹ್ನ 1.30 ಗಂಟೆಗೆ ಈ ಅಪಘಾತ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.