ನದಿ ತಿರುವು ಯೋಜನೆಯ ವಿರುದ್ಧ ಎಲ್ಲೆಡೆ ಜನಾಕ್ರೋಶ ವ್ಯಕ್ತವಾಗುತ್ತಿದೆ. ಜಿಲ್ಲೆಯ ಜನ ಜೀವನಕ್ಕೆ ಮಾರಕವಾಗುವ ಈ ಯೋಜನೆಯನ್ನು ಕೈಬಿಡಬೇಕು ಎಂಬ ಆಗ್ರಹ ಎಲ್ಲೆಡೆ ಕೇಳಿಬರುತ್ತಿದೆ. ಅಂಕೋಲಾ ತಾಲೂಕಿನ ಕಲ್ಲೇಶ್ವರ , ಹೆಗ್ಗಾರ್, ಅಚವೆ, ಕೋನಾಳ,ಹಾಗೂ ಸುತ್ತಲಿನ ಗ್ರಾಮಸ್ಥರು ಈ ಯೋಜನೆಯ ವಿರುದ್ಧ ಧ್ವನಿ ಎತ್ತಿದ್ದಾರೆ. ಯಾವುದೇ ಕಾರಣಕ್ಕೂ ನದಿ ತಿರುವು ಯೋಜನೆಯನ್ನು ಜಾರಿಗೊಳಿಸಬಾರದು ಎಂದು ಆಗ್ರಹಿಸಿದ್ದಾರೆ.

ಕಲ್ಲೇಶ್ವರದಲ್ಲಿ ಜನ ಜಾಗೃತಿ ಸಭೆ ನಡೆಯಿತು. ಸ್ಥಳೀಯ ಪ್ರಮುಖರಾದ ಗಿರೀಶ ಭಟ್ಟ ಕೋನಾಳ ಮಾತನಾಡಿ, ನದಿ ತಿರುವು ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು, ಈ ಯೋಜನೆಯ ವಿರುದ್ಧ ನ.3 ರಂದು ಯಲ್ಲಾಪುರದಲ್ಲಿ ನಡೆಯಲಿರುವ ಹೆದ್ದಾರಿ ತಡೆ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಈ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲರೂ ಭಾಗವಹಿಸಬೇಕು ಎಂದರು.

ಹೆದ್ದಾರಿ ತಡೆ ಸಂಚಾಲನಾ ಸಮೀತಿಯ ಅಧ್ಯಕ್ಷ ನಾರಾಯಣ ಭಟ್ಟ ಅಗ್ಗಾಶಿಕುಂಬ್ರಿ ಮಾತನಾಡಿ, ನದಿ ತಿರುವು ಯೋಜನೆಯ ವಿರುದ್ಧದ ಹೋರಾಟದಲ್ಲಿ ಎಲ್ಲರೂ ಸಕ್ರೀಯವಾಗಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಇಡಗುಂದಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ಭಟ್ಟ ಬಟ್ಲಗುಂಡಿ, ಪ್ರಮುಖರಾದ ರಾಘವೇಂದ್ರ ಭಟ್ಟ ಹಾಸಣಗಿ, ಸಂತೋಷ ಭಟ್ಟ ಮಳಗಾಂವ, ರಾಘವೇಂದ್ರ ಭಟ್ಟ ಸುಂಕಸಾಳ ಮುಂತಾದವರು ಮಾತನಾಡಿದರು. ಸಮೀತಿಯ ಶಶಾಂಕ ಹೆಗಡೆ, ವಿ.ಟಿ.ಹೆಗಡೆ, ನರಸಿಂಹ ಸಾತೊಡ್ಡಿ ಹಾಗೂ ಗ್ರಾಮಸ್ಥರು ಇದ್ದರು.

=================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading