ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 01.10.2026 ಅನ್ನು ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ಸಿದ್ಧಪಡಿಸಲಾದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 ರ ಬಳಿಕ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಅಂತಿಮವಾಗಿ ಒಟ್ಟು 11,39,623 ಮತದಾರರಿದ್ದು, ಇವರಲ್ಲಿ 5,70,006 ಪುರುಷರು, 5,69,614 ಮಹಿಳೆಯರು ಹಾಗೂ 3 ಇತರೆ (ತೃತೀಯ ಲಿಂಗಿ) ಮತದಾರರು ಸೇರಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

ಯೋಜನಾ ಉದ್ಯೋಗ ವಿನಿಮಯ ಕಚೇರಿ ಕಾರವಾರ ಇವರ ವತಿಯಿಂದ ಪಿಯುಸಿ, ಡಿಪ್ಲೋಮಾ ಹಾಗೂ ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳಿಗೆ ಖಾಸಗಿ ಕಂಪನಿಯಾದ ಡಿಬಿಎಸ್ ಬ್ಯಾಂಕ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗೆ ಅ.29 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನೇರ ಸಂದರ್ಶನವನ್ನು ಯೋಜನಾ ಉದ್ಯೋಗ ವಿನಿಮಯ ಕಚೇರಿ, ಶ್ರೀಮತಿ ಪ್ರೇಮಾಬಾಯಿ ರಾಯ್ಕರ ಬಿಲ್ಡಿಂಗ್, ಪಂಜಾಬ್ ನ್ಯಾಶನಲ್ ಬ್ಯಾಂಕ್ ಹತ್ತಿರ, ಸಿವಿಲ್ ಕೋರ್ಟ್ ರಸ್ತೆ, ಕಾರವಾರದಲ್ಲಿ ಏರ್ಪಡಿಸಲಾಗಿದೆ.

ವಯೋಮಿತಿ 22 ರಿಂದ 35 ವರ್ಷ, ಉದ್ಯೋಗದ ಸ್ಥಳ ಕಾರವಾರ, ಉಡುಪಿ, ಮಂಗಳೂರು, ಪುತ್ತೂರು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ರೆಸ್ಯೂಮ್ ಪ್ರತಿಯೊಂದಿಗೆ, ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಳಿಗಾಗಿ ಯೋಜನಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 8660410237, 8310044796 ಅಥವಾ ಕಚೇರಿ ದೂರವಾಣಿ ಸಂಖ್ಯೆ: 08382-226386 ಗೆ ಸಂಪರ್ಕಿಸಲು ಕಾರವಾರ ಯೋಜನಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

=================

Leave a Reply

You cannot copy content of this page