ಬೇಡ್ತಿಅಘನಾಶಿನಿ ನದಿ ತಿರುವು ಯೋಜನೆಯನ್ನು ಸಂಪೂರ್ಣವಾಗಿ ಕೈಬಿಡುವಂತೆ ಒತ್ತಾಯಿಸಿ ನವೆಂಬರ್ 3ರಂದು ಯಲ್ಲಾಪುರದಲ್ಲಿ ನಡೆಯಲಿರುವ ರಾಷ್ಟ್ರೀಯ ಹೆದ್ದಾರಿ ತಡೆ ಹೋರಾಟದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶಾಸಕ ಶಿವರಾಮ ಹೆಬ್ಬಾರ್ ಅವರು ತಮ್ಮ ಬೆಂಬಲಿಗರು ಹಾಗೂ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.

ಈ ಕುರಿತು ಬುಧವಾರ ಮಾತನಾಡಿದ ಅವರು, ಸ್ವರ್ಣವಲ್ಲಿ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಡೆಯಲಿರುವ ಈ ಹೋರಾಟದಲ್ಲಿ ನಾವೆಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ನೈಸರ್ಗಿಕ ಸಂಪತ್ತು, ಪರಿಸರ ಹಾಗೂ ಜನಜೀವನದ ಹಿತದೃಷ್ಟಿಯಿಂದ ಈ ಯೋಜನೆಯನ್ನು ಸಂಪೂರ್ಣವಾಗಿ ಕೈಬಿಡುವಂತೆ ಒತ್ತಾಯಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟದಲ್ಲಿ ಭಾಗವಹಿಸುವ ಮೂಲಕ ಒಗ್ಗಟ್ಟನ್ನು ಪ್ರದರ್ಶಿಸಿ, ಯೋಜನೆಯನ್ನು ಜಿಲ್ಲೆಯಿಂದ ಸಂಪೂರ್ಣವಾಗಿ ಕೈಬಿಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ್ ಅವರು ಮನವಿ ಮಾಡಿದ್ದಾರೆ.

============

Leave a Reply

You cannot copy content of this page