ಸ್ವರ್ಣವಲ್ಲೀ ಮಹಾ ಸಂಸ್ಥಾನದ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಭಗವದ್ಗೀತಾ ಅಭಿಯಾನವು ಯಲ್ಲಾಪುರ ತಾಲೂಕಿನ ವಿವಿದೆಡೆ ಆರಂಭಗೊಂಡಿದೆ. ಇತ್ತೀಚೆಗೆ ತಾಲೂಕಾ ಮಟ್ಟದ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ತಾಲೂಕಾ ಭಗವದ್ಗೀತಾ ಅಭಿಯಾನ ಸಮಿತಿಯ ಪ್ರಮುಖರು ತಾಲೂಕಿನ ಹಲವು ಭಾಗಗಳಿಗೆ ಭೇಟಿನೀಡಿ ಅಭಿಯಾನದ ಸಂಪರ್ಕ ಸಭೆ ನಡೆಸಿದರು.

ತಾಲೂಕಿನ ಆನಗೋಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬುಧವಾರ ಭಗವದ್ಗೀತಾ ಅಭಿಯಾನದ ಸಂಪರ್ಕ ಸಭೆ ನಡೆಸಲಾಯಿತು.

ಸಭೆಯಲ್ಲಿ ಪಾಲ್ಗೊಂಡಿದ್ದ ತಾಲೂಕಾ ಭಗವದ್ಗೀತಾ ಅಭಿಯಾನ ಸಮೀತಿಯ ಅಧ್ಯಕ್ಷ ಜಿ.ಎನ್.ಭಟ್ ತಟ್ಟಿಗದ್ದೆ ಮಾತನಾಡಿ, ಪೂಜ್ಯ ಸ್ವರ್ಣವಲ್ಲೀ ಶ್ರೀಗಳ ನೇತ್ರತ್ವದಲ್ಲಿನಡೆಯುತ್ತಿರುವ ಭಗವದ್ಗೀತಾ ಅಭಿಯಾನವನ್ನು ನಾವೆಲ್ಲರೂ ಸೇರಿ ಯಶಸ್ವಿಗೊಳಿಸಬೇಕು, ಕಳೆದ ವರ್ಷದಂತೆ ಈವರ್ಷವೂ ಅಭಿಯಾನದಲ್ಲಿ ಎಲ್ಲರೂ ಸಕ್ರೀಯವಾಗಿ ಪಾಲ್ಗೊಳ್ಳಬೇಕು,

ಯಲ್ಲಾಪುರ ತಾಲೂಕಿನಲ್ಲಿ ಇನ್ನಷ್ಟು ಹೆಚ್ಚಿನ ಕೇಂದ್ರಗಳಲ್ಲಿ ಅಭಿಯಾನ ನಡೆಯುವಂತೆ ಪ್ರಯತ್ನಿಸಬೇಕು, ಶ್ರೀಗಳ ಆಶಯದಂತೆ, ಮನೆ,ಮನೆಗಳಿಗೆ ಭಗವದ್ಗೀತೆ ತಲುಪಬೇಕು, ದೇವಾಲಯಗಳಲ್ಲಿ, ಶಾಲೆಗಳಲ್ಲಿ, ಮನೆಗಳಲ್ಲಿ ಅಭಿಯಾನವನ್ನು ಸಂಘಟಿಸಬೇಕು ಎಂದು ಮನವಿ ಮಾಡಿದರು.

ಈಗಾಗಲೇ ತಾಲೂಕಿನಲ್ಲಿ ಅನೇಕ ಕಡೆಗಳಲ್ಲಿ ಅಭಿಯಾನವು ಆರಂಭಗೊಂಡಿದೆ, ಅಭಿಯಾನಕ್ಕೆ ಸಂಬಂಧಿಸದಂತೇ ಯಾವುದಾದರೂ ಮಾಹಿತಿ ಬೇಕಿದ್ದರೆ ನಮ್ಮನ್ನು ಸಂಪರ್ಕಿಸಬಹುದು ಎಂದರು.

ಅಭಿಯಾನ ಸಮೀತಿಯ ತಾಲೂಕಾ ಸಂಚಾಲಕ ಲಕ್ಷ್ಮೀನಾರಾಯಣ ಗುಮ್ಮಾನಿ ಮಾತನಾಡಿ, ಡಿಸೆಂಬರ್ ಎರಡನೇ ವಾರದಲ್ಲಿ ನಡೆಯಲಿರುವ ತಾಲೂಕಾ ಮಟ್ಟದ ಭಗವದ್ಗೀತಾ ಅಭಿಯಾನದ ಗೀತಾ ಕಂಠಪಾಠ ಸ್ಪರ್ಧೆ, ಭಾಷಣ ಸ್ಪರ್ಧೆ, ರಸಪ್ರಶ್ನೆ ಮುಂತಾದ ಸ್ಪರ್ಧೆಗಳಲ್ಲಿ ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು, ಅಭಿಯಾನದ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕು ಎಂದರು. ಅಭಿಯಾನ ಸಮೀತಿಯ ಜಿಲ್ಲಾ ಸಂಚಾಲಕ ಕೆ.ಜಿ.ಬೋಡೆ ಅಭಿಯಾನದ ಕುರಿತು ಮಾತನಾಡಿದರು. ಸಭೆಯಲ್ಲಿ ಮಾತೆಯರು, ಗ್ರಾಮಸ್ಥರು, ಮಕ್ಕಳು ಪಾಲ್ಗೊಂಡಿದ್ದರು.

ಯಲ್ಲಾಪುರ ತಾಲೂಕಿನ ಗೋಳಿಗದ್ದೆ ಶಾಲೆಯಲ್ಲಿ ಭಗವದ್ಗೀತಾ ಅಭಿಯಾನ ಸಪ್ತಾಹದ ಸಮಾರೋಪ ಸಮಾರಂಭವು ಬುಧವಾರ ನಡೆಯಿತು.

ಈ ಕಾರ್ಯಕ್ರಮದಲ್ಲಿ ತಾಲೂಕಾ ಭಗವದ್ಗೀತಾ ಅಭಿಯಾನ ಸಮೀತಿಯ ಅಧ್ಯಕ್ಷ ಜಿ.ಎನ್.ಭಟ್ ತಟ್ಟಿಗದ್ದೆ, ತಾಲೂಕಾ ಸಂಚಾಲಕ ಲಕ್ಷ್ಮೀನಾರಾಯಣ ಗುಮ್ಮಾನಿ, ಜಿಲ್ಲಾ ಸಂಚಾಲಕ ಕೆ.ಜಿ.ಬೋಡೆ ಹಾಗೂ ಮಾತೆಯರು, ವಿದ್ಯಾರ್ಥಿಗಳು, ಶಿಕ್ಷಕರು, ಶಾಲಾಭಿವೃದ್ಧಿ ಸಮೀತಿಯ ಪ್ರಮುಖರು, ಊರ ನಾಗರಿಕರು ಪಾಲ್ಗೊಂಡಿದ್ದರು.

===================

Leave a Reply

You cannot copy content of this page