ಯಲ್ಲಾಪುರ ಪಟ್ಟಣದ ಸಮಾಜ ಸೇವಕ, ನಿವೃತ್ತ ವಲಯ ಅರಣ್ಯಾಧಿಕಾರಿ ಸುರೇಶ ಬೋರ್ಕರ್ ಅವರು ಈ ವರ್ಷದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇವರ ಸಾಮಾಜಿಕ ಸೇವೆಯನ್ನು ಗುರುತಿಸಿ ಬೆಂಗಳೂರಿನ ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ (ರಿ) ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಸುರೇಶ ಬೋರ್ಕರ್

ಕನ್ನಡ ರಾಜ್ಯೋತ್ಸವದ ನಿಮಿತ್ತ ಈ ಪ್ರಶಸ್ತಿಯನ್ನು ಕನ್ನಡ ನಾಡು, ನುಡಿಗೆ, ಕಲೆ, ಸಾಹಿತ್ಯ, ಸಂಸ್ಕೃತಿ, ಸಮಾಜ ಸೇವೆ ಮುಂತಾದ ಕ್ಷೇತ್ರಗಳಲ್ಲಿ ಗಣನೀಯ ಕೊಡುಗೆ ನೀಡಿದ ಮಹನೀಯರಿಗೆ ನೀಡಲಾಗುತ್ತಿದೆ.

ನ.3 ರಂದು ಸಂಜೆ 5.30ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ, ಕನ್ನಡಭವನ, ನಯನ ಸಭಾಂಗಣದಲ್ಲಿ ಈ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

ಅನೇಕ ವರ್ಷಗಳ ಕಾಲ ಅರಣ್ಯ ಇಲಾಖೆಯಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುರೇಶ ಬೋರ್ಕರ್ ಅವರು ಪ್ರಸ್ತುತ ವಿವಿಧ ಕ್ಷೇತ್ರಗಳಲ್ಲಿ ಸೇವೆಸಲ್ಲಿಸುತ್ತಿದ್ದಾರೆ. ಟೌನ್ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಸ್ಮರಣೀಯ ಸೇವೆ ಸಲ್ಲಿಸಿ, ಪ್ರಸ್ತುತ ಲಯನ್ಸ್ ಕ್ಲಬ್ ಜೋನಲ್ ಚೇರ್ ಪರ್ಸನ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ನಿರಂತರವಾಗಿ ಸಮಾಜ ಸೇವೆ ಸಲ್ಲಿಸುತ್ತ ಮಾದರಿಯಾಗಿದ್ದಾರೆ.

==============

Leave a Reply

You cannot copy content of this page