ಯಲ್ಲಾಪುರ ತಾಲೂಕಿನ ಕಿರವತ್ತಿಯಲ್ಲಿ ರವಿವಾರ ಜಯಕರ್ನಾಟಕ ಸಂಘಟನೆಯ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು.

ವಿಲ್ಸನ್ ಫರ್ನಾಂಡಿಸ್

ಜಯಕರ್ನಾಟಕ ಸಂಘಟನೆಯ ತಾಲೂಕಾ ಅಧ್ಯಕ್ಷ ವಿಲ್ಸನ್ ಫರ್ನಾಂಡಿಸ್ ಮಾತನಾಡಿ, ನಮ್ಮ ಕನ್ನಡ ಭಾಷೆ, ನಮ್ಮ ನೆಲ, ನಮ್ಮ ಸಂಸ್ಕೃತಿ ಮತ್ತು ನಮ್ಮ ನಾಡಿನ ಮಹೋನ್ನತ ಇತಿಹಾಸದ ಬಗ್ಗೆ ನಾವೆಲ್ಲರೂ ಅರಿತುಕೊಂಡು, ನಾಡುನುಡಿಯ ಬಗ್ಗೆ ಹೆಮ್ಮೆ ಮತ್ತು ಅಭಿಮಾನ ಪಡಬೇಕು. ಜಯಕರ್ನಾಟಕ ಸಂಘಟನೆಯು ನಿರಂತರವಾಗಿ ನಾಡು ನುಡಿಯ ಕೈಂಕರ್ಯದಲ್ಲಿ ತೊಡಗಿಸಿಕೊಂಡಿದೆ, ನಾಡಿನ ಸಮಸ್ತ ಜನರ ಅಭ್ಯುದಯಕ್ಕೆ ನಮ್ಮ ಸಂಘಟನೆ ಅನೇಕ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಂಡಿದೆ ಎಂದರು.

ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಕನ್ನಡ ನಾಡು, ನುಡಿಯ ಬಗ್ಗೆ ಜಯಘೋಷ ಮೊಳಗಿತು. ಜಯಕರ್ನಾಟಕ ಸಂಘಟನೆಯ ಪದಾಧಿಕಾರಿಗಳು, ಸದಸ್ಯರು, ಎಸ್‍ಐ ದೀಪಕ ಹಾಗೂ ಕಿರವತ್ತಿ ಗ್ರಾಮದ ನಾಗರಿಕರು ಉಪಸ್ಥಿತರಿದ್ದರು.

==============

Leave a Reply

You cannot copy content of this page