ನದಿ ತಿರುವು ಯೋಜನೆಯನ್ನು ವಿರೋಧಿಸಿ ನ.3ರಂದು ಯಲ್ಲಾಪುರದಲ್ಲಿ ನಡೆಯಲಿರುವ ಹೆದ್ದಾರಿ ತಡೆ ಪ್ರತಿಭಟನೆಗೆ ಜಯಕರ್ನಾಟಕ ಸಂಘಟನೆ ಬೆಂಬಲ ವ್ಯಕ್ತಪಡಿಸಿದೆ.

ವಿಲ್ಸನ್ ಫರ್ನಾಂಡಿಸ್

ಈ ಕುರಿತು ಜಯಕರ್ನಾಟಕ ಸಂಘಟನೆಯ ತಾಲೂಕಾ ಅಧ್ಯಕ್ಷ ವಿಲ್ಸನ್ ಫರ್ನಾಂಡಿಸ್ ರವಿವಾರ ಇ-ಯಲ್ಲಾಪುರ ಡಿಜಿಟಲ್ ನ್ಯೂಸ್ ಪ್ರತಿನಿಧಿಯೊಂದಿಗೆ ಮಾತನಾಡಿ, ನಮ್ಮ ಜಿಲ್ಲೆಯ ಉಳಿವಿಗಾಗಿ ನದಿತಿರುವು ಯೋಜನೆಯನ್ನು ತಕ್ಷಣ ಕೈಬಿಡಬೇಕು, ಅವೈಜ್ಞಾನಿಕ ಈ ಯೋಜನೆಯು ಜಿಲ್ಲೆಯ ಜನಜೀವನ ಮತ್ತು ಪರಿಸರದ ಮೇಲೆ ಪ್ರತೀಕೂಲವಾದ ಪರಿಣಾಮ ಬೀರಲಿದೆ. ಯಾವುದೇ ಕಾರಣಕ್ಕೂ ಈ ಯೋಜನೆಯನ್ನು ಜಾರಿಗೊಳಿಸಬಾರದು ಎಂದು ಅವರು ಆಗ್ರಹಿಸಿದ್ದಾರೆ.

ನದಿ ತಿರುವು ಯೋಜನೆಯ ವಿರುದ್ಧ ನ.3 ರಂದು ಯಲ್ಲಾಪುರದಲ್ಲಿ ನಡೆಯಲಿರುವ ಹೋರಾಟಕ್ಕೆ ನಮ್ಮ ಸಂಘಟನೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು, ಸಂಘಟನೆಯ ಪದಾಧಿಕಾರಿಗಳು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದೇವೆ ಎಂದು ವಿಲ್ಸನ್ ಫರ್ನಾಂಡಿಸ್ ತಿಳಿಸಿದ್ದಾರೆ.

===============

Leave a Reply

You cannot copy content of this page