




ಖಾಸಗಿ ಕಂಪನಿಯಲ್ಲಿ ಉದ್ಯೋಗಾವಕಾಶ: ನೇರ ಸಂದರ್ಶನ

ಕಾರವಾರದ ಯೋಜನಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಐಟಿಐ ಡಿಪ್ಲೋಮಾ ಹಾಗೂ ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳಿಗೆ ಖಾಸಗಿ ಕಂಪನಿಯಾದ ಕಾಂಚನಾ ಹ್ಯುಂಡೈ ಪ್ರೈವೇಟ್ ಲಿಮಿಟೆಡ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗೆ ನ.6 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನೇರ ಸಂದರ್ಶನವನ್ನು ಯೋಜನಾ ಉದ್ಯೋಗ ವಿನಿಮಯ ಕಚೇರಿ ಶ್ರೀಮತಿ ಪ್ರೇಮಾಬಾಯಿ ರಾಯ್ಕರ ಬಿಲ್ಡಿಂಗ್, ಪಂಜಾಬ್ ನ್ಯಾಶನಲ್ ಬ್ಯಾಂಕ್ ಹತ್ತಿರ, ಸಿವಿಲ್ ಕೋರ್ಟ್ ರಸ್ತೆ, ಕಾರವಾರದಲ್ಲಿ ಏರ್ಪಡಿಸಲಾಗಿದೆ.

ಉದ್ಯೋಗದ ಸ್ಥಳ : ಕಾರವಾರ, ಕುಮಟಾ, ಹಳಿಯಾಳ, ದಾಂಡೇಲಿ, ಮುಂಡಗೋಡ, ಕುಂದಾಪುರ, ಉಡುಪಿ, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ರೆಸ್ಯೂಮ್ ಪ್ರತಿಯೊಂದಿಗೆ, ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಳಿಗಾಗಿ ಈ ಕಚÉೀರಿಯನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 6364860521, 8310044796 ಅಥವಾ ಕಚÉೀರಿ ದೂರವಾಣಿ ಸಂಖ್ಯೆ: 08382-226386 ಗೆ ಸಂಪರ್ಕಿಸುವಂತೆ ಕಾರವಾರದ ಯೋಜನಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನ
ಕೃಷಿ ವಿಶ್ವವಿದ್ಯಾಲಯ, ಧಾರವಾಡದ ಅಡಿಯಲ್ಲಿ ಬರುವ ಅರಣ್ಯ ಮಹಾವಿದ್ಯಾಲಯ, ಶಿರಸಿಯಲ್ಲಿ ಸಹಾಯಕ ಪ್ರಾಧ್ಯಾಪಕರು (ಕೃಷಿ ಸಂಖ್ಯಾಶಾಸ್ತ್ರ) ಹುದ್ದೆಗೆ ತಾತ್ಕಾಲಿಕವಾಗಿ 179 ದಿನಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಎರಡು ಪ್ರತಿಗಳಲ್ಲಿ ಟೈಪ್ ಮಾಡಿದ ವಿವರಗಳೊಂದಿಗೆ ನ.18 ರಂದು ಬೆಳಗ್ಗೆ 11 ಗಂಟೆಗೆ ಡೀನ್ (ಅರಣ್ಯ) ಅರಣ್ಯ ಮಹಾವಿದ್ಯಾಲಯ, ಶಿರಸಿರವರ ಕಾರ್ಯಾಲಯದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು. ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಅವುಗಳ ಎರಡು ಸ್ವಯಂ ಧೃಡಿಕೃತ ಪ್ರತಿಗಳನ್ನು ಸಂದರ್ಶನದ ಸಮಯದಲ್ಲಿ ತರಲು ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಶ್ವವಿದ್ಯಾಲಯದ ಜಾಲತಾಣಕ್ಕೆ ಭೇಟಿ ನೀಡಬಹುದು ಅಥವಾ ಮೊಬೈಲ್ ಸಂಖ್ಯೆ:9448630255 ನ್ನು ಸಂಪರ್ಕಿಸುವಂತೆ ಶಿರಸಿಯ ಅರಣ್ಯ ಮಹಾವಿದ್ಯಾಲಯದ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

=================















