




ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ 220 ಕ್ಕೂ ಅಧಿಕ ಅರ್ಜಿಗಳ ವಿಚಾರಣೆ

ಸಹಕಾರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಶನಿವಾರ ಶಿರಸಿಯ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಆಡಳಿತ, ನಗರಸಭೆ, ಹಾಗೂ ತಾಲೂಕು ಪಂಚಾಯತ್ ಇವರ ಸಹಯೋಗದಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ಸಾರ್ವಜನಿಕ ರಿಂದ 220 ಕ್ಕೂ ಅಧಿಕ ಅರ್ಜಿಗಳನ್ನು ಸ್ವೀಕರಿಸಲಾಯಿತು.

ಪಂ. ರಾಜ್ ಇಂಜಿನಿಯರಿಂಗ್ ಇಲಾಖೆಯ 57, ಗ್ರಾಮೀಣಾಭಿವೃದ್ಧಿ ಮತ್ತು ಪಂ. ರಾಜ್ ಇಲಾಖೆಯ 49, ಶಿರಸಿ ನಗರ ಸಭೆಯ 20, ಹೆಸ್ಕಾಂ 16, ಅರಣ್ಯ ಇಲಾಖೆಯ 13, ಆರೋಗ್ಯ ಇಲಾಖೆಯ 2, ರಸ್ತೆ ಸಾರಿಗೆ ಸಂಸ್ಥೆಯ 7, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ 15 ಮತ್ತು ಕಂದಾಯ ಇಲಾಖೆಯ 37 ಸೇರಿದಂತೆ 220 ಕ್ಕೂ ಅಧಿಕ ಸಾರ್ವಜನಿಕ ಸಮಸ್ಯೆಗಳನ್ನು ಆಲಿಸಲಾಯಿತು.
ಹಲವು ವಷಕಗಳಿಂದ ಮನೆಗೆ ವಿದ್ಯುತ್ ಸಂಪರ್ಕ ಪಡೆಯಲು ಸಮಸ್ಯೆ ಎದುರಿಸುತ್ತಿದ್ದ ಮಹಿಳೆಗೆ ಒಂದು ವಾರದೊಳಗೆ ಎಲ್ಲಾ ಸಮಸ್ಯೆಗಳನ್ನು ನಿವಾರಿಸಿ ಸಂಪರ್ಕ ನೀಡುವಂತೆ ಪಂಚಾಯತ್ ಅಧಿಕಾರಿ ಮತ್ತು ಹೆಸ್ಕಾಂ ಅಧಿಕಾರಿಗಳಿಗೆ ಸಚಿವರು ಸೂಚಿಸಿ, ಈ ಬಗ್ಗೆ ತಮಗೂ ವರದಿ ನೀಡುವಂತೆ ನಿರ್ದೇಶನ ನೀಡಿದರು.
ಅಪಘಾತದಲ್ಲಿ ಕಾಲು ಕಳೆದು ಕೊಂಡಿದ್ದ ಹಿತ್ಲಲ್ಲಿ ಯ ಗಂಗಾಧರ ದೇವಪ್ಪ ಆಚಾರಿ ಗೆ ಯು.ಡಿ.ಐ.ಡಿ ಕಾರ್ಡ್ ನೀಡಲು ಸತಾಯಿಸುತ್ತಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಕ್ಷಣ ಕಾರ್ಡ್ ನೀಡುವಂತೆ ಸಚಿವರು ಸೂಚಿಸಿದರು, ಕಾರ್ಡ್ ದೊರೆತ ಕೂಡಲೇ ತ್ರಿ ಚಕ್ರದ ಮೋಟಾರ್ ಸೈಕಲ್ ನೀಡುವುದಾಗಿ ಶಾಸಕ ಶಿವರಾಮ ಹೆಬ್ಬಾರ್ ಭರವಸೆ ನೀಡಿದರು.
ಪಕ್ಕದ ಮನೆಯ ತೆಂಗಿನಮರದಿಂದ ಮನೆಗೆ ಮತ್ತು ತನಗೆ ಹಾನಿಯಾಗಿದ್ದು, ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ ದಯಾ ಮರಣ ನೀಡಿ ಇಲ್ಲವೇ ಮರಗಳನ್ನು ತೆರವುಗೊಳಿಸಿ ಎಂದ ವ್ಯಕ್ತಿಯ ಮನವಿಯ ಕುರಿತಂತೆ 2-3 ದಿನದಲ್ಲಿ ಮರಗಳನ್ನು ಕಟಾವಣೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.
ವನ್ಯ ಜೀವಿಗಳಿಂದ ಹಾನಿಯಾದರೆ ನೀಡುವ ಪರಿಹಾರದ ಮೊತ್ತವನ್ನು ಪರಿಷ್ಕರಣೆ ಮಾಡಲಾಗಿದ್ದು ಈ ಬಗ್ಗೆ ಅರಣ್ಯ ಅಧಿಕಾರಿಗಳು ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ಮತ್ತು ಅಪಾಯಕಾರಿ ಮರಗಳ ಕಡಿಯುವಂತೆ ಸಚಿವರು ಸೂಚಿಸಿದರು.
ಈ ಸಂದರ್ಭದಲ್ಲಿ ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ, ತಾಲೂಕು ಗ್ಯಾರೆಂಟಿ ಸುಮಾ ಉಗ್ರಣಕಾರ್, ನಗರ ಯೋಜನೆ ಪ್ರಾಧಿಕಾರದ ಅಧ್ಯಕ್ಷರ ಜಗದೀಶ್, ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ, ಜಿ. ಪಂ. ಸಿಇಓ ಡಾ. ದಿಲೀಷ್ ಶಶಿ, ಪೆÇಲೀಸ್ ವರಿಷ್ಠಾಧಿಕಾರಿ ದೀಪನ್ ಎಂ. ಎನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಯೋಗೇಶ್, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಕಾರವಾರ ಉಪ ವಿಭಾಗಾಧಿಕಾರಿ ರಮ್ಯಾ, ಶಿರಸಿ ಉಪ ವಿಭಾಗಾಧಿಕಾರಿ ಚಂದ್ರಶೇಖರ ಇದ್ದರು.

=================















