ಸಮುದಾಯದ ಸಹಭಾಗಿತ್ವದಲ್ಲಿ ಮಾತ್ರ ಸಂಘಟನೆ ಸಾಧ್ಯ. ಪ್ರತಿಭಾ ಕಾರಂಜಿಯ ಕಾರ್ಯಕ್ರಮ ಕೇವಲ ಕಾರ್ಯಕ್ರಮ ಆಗಿರದೇ ಶೈಕ್ಷಣಿಕ ಚಟುವಟಿಕೆಗಳ ಜೊತೆಗಿನ ಪ್ರತಿಭೆಗಳನ್ನು ಗುರುತಿಸುವ ಮಹತ್ವದ ಕಾರ್ಯವಾಗಿದೆ. ಮಕ್ಕಳ ಸೃಜನಶೀಲ ಅಭಿವ್ಯಕ್ತಿಗೆ ಇಂತಹ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರೇಖಾ ನಾಯ್ಕ ಹೇಳಿದರು.

ಅವರು ಯಲ್ಲಾಪುರ ತಾಲೂಕಿನ ವಜ್ರಳ್ಳಿಯ ಸಮೀಪದ ಬೀಗಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಸಮಾರೋಪದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡುತ್ತಿದ್ದರು.

ಸಭೆಯಲ್ಲಿ ದೈಹಿಕ ಪರಿವೀಕ್ಷಕರಾದ ಪ್ರಕಾಶ ತಾರಿಕೊಪ್ಪ, ಶಿಕ್ಷಣ ಸಂಯೋಜಕ ಪ್ರಶಾಂತ, ಜಿ. ಗಣಪತಿ ಪಟಗಾರ, ಉಪಸ್ಥಿತರಿದ್ದರು. ಎಸ್ ಡಿ ಎಂ ಸಿ ಅಧ್ಯಕ್ಷ ನರಸಿಂಹ ಕೋಮಾರ ಉಪ್ಪರಿಗೆಮನೆ ಸಮಾರೋಪ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಿ ಆರ್ ಪಿ ಪ್ರಭಾಕರ ಭಟ್ಟ ಸ್ವಾಗತಿಸಿದರು. ಶಿಕ್ಷಕ ಸುರೇಶ ಗೌಡ ನಿರ್ವಹಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು

=================

Leave a Reply

You cannot copy content of this page