ಯಲ್ಲಾಪುರ ಟೌನ್ ಲಯನ್ಸ್ ಕ್ಲಬ್ ಸಂಸ್ಥೆಯ ವತಿಯಿಂದ ನ.22 ರವಿವಾರ ಪಟ್ಟಣದ ವೆಂಕಟ್ರಮಣ ಮಠದ ವೇದವ್ಯಾಸ ಸಭಾಭವನದಲ್ಲಿ ಸಕ್ಕರೆ ಕಾಯಿಲೆಯ ಉಚಿತ ತಪಾಸಣಾ ಶಿಬಿರ ಹಾಗೂ ತಜ್ಞ ವೈದ್ಯರೊಂದಿಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಈ ಶಿಬಿರವು ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ತಾಲೂಕಾ ಆರೋಗ್ಯಧಿಕಾರಿ ಡಾ. ನರೇಂದ್ರ ಪವಾರ್ ಭಾಗವಹಿಸಲಿದ್ದಾರೆ. ಡಯಾಬಿಟಿಸ್ ತಜ್ಞ ವೈದ್ಯ MJF ಡಾ.ನಿತೀಶ ಜೈನ್, ಡಯಾಬಿಟಿಸ್ ನ್ಯೂರೋಪತಿ ತಜ್ಞ ವೈದ್ಯ ಡಾ. ಸುನೀಲ್ ಕಾರಿ, ಡಯಾಬಿಟಿಸ್ ನರ ತಜ್ಞರಾದ ಡಾ.ಶಶಾಂಕ ಕಾರಿ ಪಾಲ್ಗೊಳ್ಳುವರು.

ಸಕ್ಕರೆ ಕಾಯಿಲೆ ಬರದಂತೆ ವಹಿಸಬೇಕಾದ ಮುನ್ನೆಚ್ಚರಿಕೆಯ ಬಗ್ಗೆ ಹಾಗೂ ಸಕ್ಕರೆ ಕಾಯಿಲೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ತಜ್ಞ ವೈದ್ಯರು ಸಾರ್ವಜನಿಕರೊಂದಿಗೆ ಸಂವಾದ ನಡೆಲಿದ್ದಾರೆ.

ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆಯಬೇಕು ಎಂದು ಯಲ್ಲಾಪುರ ಲಯನ್ಸ್ ಕ್ಲಬ್ ಅಧ್ಯಕ್ಷ MJF ಶೇಷಗಿರಿ ಪ್ರಭು ತಿಳಿಸಿದ್ದಾರೆ.

ಈ ಉಚಿತ ಶಿಬಿರದಲ್ಲಿ ಪಾಲ್ಗೊಳ್ಳುವವರು ಒಂದು ಗಂಟೆ ಮುಂಚಿತವಾಗಿ ಆಗಮಿಸಿ ತಮ್ಮ ಹೆಸರನ್ನು ನೋಂದಾಯಿಸಬೇಕೆಂದು ಕೋರಲಾಗಿದೆ.

=================

Leave a Reply

You cannot copy content of this page