ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 52ರ ಪಕ್ಕದಲ್ಲಿ ಬುಧವಾರ ಕರಿ ಚಿರತೆಯ ಮೃತದೇಹ ಪತ್ತೆಯಾಗಿದೆ.

ಮೇಲ್ನೋಟಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿ ಕರಿ ಚಿರತೆ ಮೃತಪಟ್ಟಿದೆ ಎನ್ನಲಾಗಿದೆ. ಸ್ಥಳಕ್ಕೆ ಯಲ್ಲಾಪುರ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯ ಅಧಿಕಾರಿ, ಉಪ ವಲಯ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪರಿಚಿತ ವಾಹನ ಡಿಕ್ಕಿಯಾಗಿ ಕರಿ ಚಿರತೆ ಮೃತ ಪಟ್ಟಿರಬಹುದು ಎಂದು ಅರಣ್ಯ ಇಲಾಖೆಯವರು ಅಂದಾಜಿಸಿದ್ದಾರೆ. ಈ ಬಗ್ಗೆ ಯಲ್ಲಾಪುರ ವಲಯದಲ್ಲಿ ವನ್ಯಜೀವಿ ಸಂರಕ್ಷಣಾ ಅಧಿನಿಯಮ 1972ರ ಪ್ರಕಾರ ವನ್ಯಜೀವಿ ಅಪರಾಧ ವರದಿಯಂತೆ ಪ್ರಕರಣ ದಾಖಲಿಸಲಾಗಿದೆ. ನ್ಯಾಯಾಲಯದ ಅನುಮತಿ ಪಡೆದುಕೊಂಡು, ಮೃತ ಕರಿಚಿರತೆಯನ್ನು ತಾಲೂಕಾ ಪಶು ವೈದ್ಯಾಧಿಕಾರಿ ನೇತ್ರತ್ವದ ತಂಡವು ಯಲ್ಲಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಉಪಸ್ಥಿತಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿತು.

ಅರಣ್ಯ ಇಲಾಖೆಯ ಅಧಿಕಾರಿಗಳು, ಗ್ರಾಮ ಅರಣ್ಯ ಸಮಿತಿಯ ಪಧಾಧಿಕಾರಿಗಳು, ಪುಣೆಯ ವನ್ಯಜೀವಿ ಸಂಶೋಧನೆ ಹಾಗೂ ಸಂರಕ್ಷಣಾ ಸಂಸ್ಥೆಯ ಪ್ರತಿನಿಧಿಗಳು ಹಾಗೂ ವನ್ಯಜೀವಿ ತಜ್ಞರು ಉಪಸ್ಥಿತರಿದ್ದರು. ನಂತರ ಮೃತ ಕರಿಚಿರತೆಯನ್ನು ವನ್ಯಜೀವಿ ಸಂರಕ್ಷಣಾ ಅಧಿನಿಯಮ 1972ರ ನಿಯಮಾನುಸಾರ ವಿಲೇವಾರಿ ಮಾಡಲಾಯಿತು. ಪ್ರಕರಣದ ಮುಂದಿನ ತನಿಖೆ ನಡೆದಿದೆ.

=================

Leave a Reply

You cannot copy content of this page