








ನ.21 ರಂದು ಯಲ್ಲಾಪುರದಲ್ಲಿ ಸಚಿವ ಸವದಿ ಅಧ್ಯಕ್ಷತೆಯಲ್ಲಿ ಪ್ರಜಾಸೇವೆ ಆಂದೋಲನ ಸಭೆ

ಜಿಲ್ಲೆಯ ಜನತೆಯ ಅಹವಾಲುಗಳನ್ನು ಆಲಿಸಿ, ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡಲು ಸಹಕಾರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶಿವರಾಮ ಹೆಬ್ಬಾರ್ ಅವರ ಉಪಸ್ಥಿತಿಯಲ್ಲಿ ತಾಲೂಕ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯು ನ.21 ರಂದು ಬೆಳಗ್ಗೆ 10.30 ಕ್ಕೆ ಯಲ್ಲಾಪುರದ ಕಾರ್ಮಿಕ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ದ್ವಿ.ದರ್ಜೆ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ
ಕಾರವಾರ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಬಿ.ಕಾಮ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದ್ದು, ಇಂಗ್ಲಿಷ್ ಮತ್ತು ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ಹಾಗೂನಿಮಿಷಕ್ಕೆ ಕನಿಷ್ಠ 30 ಪದಗಳಟೈಪಿಂಗ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. ಕನ್ನಡ ಟೈಪಿಂಗ್ ಜ್ಞಾನ, ಎಂಎಸ್ ವರ್ಡ್ ಅಪ್ಲಿಕೇಶನ್ ಮತ್ತು ಟ್ಯಾಲಿ ಹೆಚ್ಚುವರಿ ಅರ್ಹತೆಯಾಗಿರುತ್ತದೆ. ಹುದ್ದೆಯ ನೇಮಕಾತಿಯು ಸಂಪೂರ್ಣವಾಗಿ ತಾತ್ಕಾಲಿಕ ಆಧಾರದ ಮೇಲೆ ಮಾತ್ರ ಇರುತ್ತದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ವಿವರಗಳನ್ನು (ಸಿವಿ) ಮತ್ತು ಎಲ್ಲಾ ಅಗತ್ಯ ದಾಖಲೆಗಳ ದೃಢೀಕೃತ ಪ್ರತಿಗಳೊಂದಿಗೆ ಅರ್ಜಿಗಳನ್ನು ಕಚೇರಿಯ ವಿಳಾಸಕ್ಕೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಕಳುಹಿಸಬಹುದು. ಅರ್ಜಿಗಳನ್ನು “ಅಧ್ಯಕ್ಷರು, ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ”, ಕೈಗಾ ನಿಲಯ, ಕೋಡಿಬಾಗ್, ಕಾರವಾರ- 581303 ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿಗಳನ್ನು ಸ್ವೀಕರಿಸಲು ಡಿಸೆಂಬರ್ 3 ಕೊನೆಯ ದಿನಾಂಕವಾಗಿದ್ದು, ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಮಯದಲ್ಲಿ ದೂ.ಸಂ: 08382 295540 ನ್ನು ಸಂಪರ್ಕಿಸುವಂತೆ ಕಾರವಾರ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಎಲ್ಲಾ ನಾಗರಿಕ ಸೇವಾ ಕೇಂದ್ರಗಳು ಇನ್ನು ಮುಂದೆ ಪ್ರಜಾ ಸೇವಾ ಕೇಂದ್ರ ಎಂದು ಮರುನಾಮಕರಣ
ರಾಜ್ಯದಾದ್ಯಂತ ವಿವಿಧ ಹೆಸರುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಲ್ಲಾ ನಾಗರಿಕ ಸೇವಾ ಕೇಂದ್ರಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ “ಪ್ರಜಾ ಸೇವಾ ಕೇಂದ್ರ” ಎಂದು ಮರುನಾಮಕರಣ ಮಾಡಿ ಕರ್ನಾಟಕ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.
ಪ್ರಜಾಸೇವಾ ಇಲಾಖೆಯ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದ (ಇಡಿಸಿಎಸ್) ಅಡಿಯಲ್ಲಿ ಬೆಂಗಳೂರು ನಗರದಲ್ಲಿ ‘ಬೆಂಗಳೂರು ಒನ್’, ಇತರೆ ನಗರ ಹಾಗೂ ಪಟ್ಟಣಗಳಲ್ಲಿ ‘ಕರ್ನಾಟಕ ಒನ್’ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ‘ಗ್ರಾಮ ಒನ್’ ಎಂಬ ಹೆಸರುಗಳಲ್ಲಿ ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳನ್ನು ಒದಗಿಸಲಾಗುತ್ತಿತ್ತು. ರಾಜ್ಯಾದ್ಯಂತ ಈ ಕೇಂದ್ರಗಳು ಬೇರೆ ಬೇರೆ ಹೆಸರುಗಳಿಂದ ಕರೆಯಲ್ಪಡುತ್ತಿದ್ದ ಕಾರಣ, ಸೇವೆಗಳ ವಿತರಣೆಯಲ್ಲಿ ಏಕರೂಪತೆ ತರುವ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಈ ಮರುನಾಮಕರಣ ಮಾಡಲಾಗಿದೆ.
ನವೆಂಬರ್.18 ರಿಂದಲೇ ರಾಜ್ಯದ ಎಲ್ಲಾ ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳನ್ನು ‘ಪ್ರಜಾ ಸೇವಾ ಕೇಂದ್ರ’ ಎಂದು ಕರೆಯಲಾಗುವುದು. ಇಂದಿನಿಂದ ಎಲ್ಲಾ ಅಧಿಕೃತ ಪತ್ರ ವ್ಯವಹಾರಗಳು, ನಾಮಫಲಕಗಳು, ವೆಬ್ ಪೆÇೀರ್ಟಲ್ಗಳು, ತಂತ್ರಾಂಶಗಳು (ಸಾಫ್ಟ್ವೇರ್), ರಸೀದಿಗಳು (ಸ್ವೀಕೃತಿಗಳು) ಹಾಗೂ ಪ್ರಚಾರ ಸಾಮಗ್ರಿಗಳಲ್ಲಿ ‘ಪ್ರಜಾ ಸೇವಾ ಕೇಂದ್ರ’ ಎಂಬ ಹೆಸರನ್ನೇ ಬಳಸಲು ಸೂಚಿಸಲಾಗಿದೆ.
ರಾಜ್ಯದ ಎಲ್ಲಾ ಪ್ರಜಾ ಸೇವಾ ಕೇಂದ್ರಗಳಿಗೆ ಏಕರೂಪದ ಬ್ರಾಂಡಿಂಗ್, ನಾಮಫಲಕದ ವಿನ್ಯಾಸ, ಲಾಂಛನ, ಬಣ್ಣದ ವಿನ್ಯಾಸ ಇತ್ಯಾದಿ ರೂಪಿಸಿ ಸರ್ಕಾರದಿಂದ ಅನುಮೋದನೆ ಪಡೆಯುವಂತೆ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದ ನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ. ಅತ್ಯಂತ ಆದ್ಯತೆಯ ಮೇಲೆ ಅನುಷ್ಠಾನ: ಕೇಂದ್ರಗಳ ನಿರ್ವಾಹಕರು ಹಾಗೂ ಫ್ರಾಂಚೈಸಿಗಳೊಂದಿಗಿನ ಒಪ್ಪಂದಗಳಲ್ಲಿಯೂ ಹೊಸ ಹೆಸರನ್ನು ಅಳವಡಿಸಿ, ಈ ಆದೇಶವನ್ನು ರಾಜ್ಯಾದ್ಯಂತ ಅತ್ಯಂತ ಆದ್ಯತೆಯ ಮೇರೆಗೆ ಜಾರಿಗೊಳಿಸುವಂತೆ ಪ್ರಜಾಸೇವಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ, ಆದೇಶ ಹೊರಡಿಸಿದ್ದಾರೆ.

=================















