ಜಿಲ್ಲೆಯಲ್ಲಿ ಬಹು ಚರ್ಚಿತವಾಗಿರುವ ಬೇಡ್ತಿ ವರದಾ ನದಿ ಜೋಡಣೆ ಕುರಿತಂತೆ ಜಿಲ್ಲೆಯ ಮಠಾಧೀಶರು, ಜನಪ್ರತಿನಿಧಿಗಳು, ರೈತರು, ಸಾರ್ವಜನಿಕರು ಯೋಜನೆಯಿಂದ ಜಿಲ್ಲೆಗೆ ಅನ್ಯಾಯವಾಗಲಿದ್ದು, ಪರಿಸರ ನಾಶವಾಗಲಿದೆ ಎಂದು ಪಕ್ಷಾತೀತವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದು ಈ ಕುರಿತ ಜಿಲ್ಲೆಯ ಜನರ ಭಾವನೆಗಳನ್ನು ಮುಖ್ಯಮಂತ್ರಿಗಳು ಮತ್ತು ಸಂಬಂಧಪಟ್ಟ ಸಚಿವರ ಗಮನಕ್ಕೆ ಮುಟ್ಟಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಹಕಾರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷಣ ಸವದಿ ಹೇಳಿದರು.

ಶನಿವಾರ ಯಲ್ಲಾಪುರದಲ್ಲಿ ನಡೆದ ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ ಮಾತನಾಡಿದ ಸಚಿವರು, ಯೋಜನೆಯ ಬಗ್ಗೆ ಹಲವು ಊಹಾಪೋಹ, ಚರ್ಚೆಗಳ ಮೂಲಕ ಜನರನ್ನು ದಿಕ್ಕು ತಪ್ಪಿಸುವ ಕೆಲಸ ನಡೆಯುತ್ತಿದ್ದು, ಈ ಯೋಜನೆಯ ಕುರಿತಂತೆ ಸಾರ್ವಜನಿಕರು ಯಾವುದೇ ರೀತಿಯ ಆತಂಕಗಳಿಗೆ ಒಳಗಾಗಬಾರದು. ಯೋಜನೆಯ ವಿಷಯದಲ್ಲಿ ಜಿಲ್ಲೆಯ ಜನತೆಯ ಭಾವನೆಗಳನ್ನು ಅರ್ಥ ಮಾಡಿಕೊಂಡು ಮುಂದುವರೆಯುವುದಾಗಿ ಸ್ಪಷ್ಟಪಡಿಸಿದರು.

=================

Leave a Reply

You cannot copy content of this page